Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ದೇವರು, “ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:5
27 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.


ಆಗ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ಈಜಿಪ್ಟಿಗೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.


ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.


ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.


“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.


“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.


ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು.


“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.


ಯೆಹೋವ ದೇವರು ಮೋಶೆಗೆ, “ನಿನ್ನ ಕೈಚಾಚಿ, ಅದರ ಬಾಲವನ್ನು ಹಿಡಿ,” ಎಂದಾಗ, ಅವನು ಕೈಚಾಚಿ ಅದನ್ನು ಹಿಡಿದ ಕೂಡಲೇ, ಅದು ಅವನ ಕೈಯಲ್ಲಿ ಕೋಲಾಯಿತು.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು