Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:9 - ಕನ್ನಡ ಸಮಕಾಲಿಕ ಅನುವಾದ

9 ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:9
5 ತಿಳಿವುಗಳ ಹೋಲಿಕೆ  

ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು.


ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು