Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:10 - ಕನ್ನಡ ಸಮಕಾಲಿಕ ಅನುವಾದ

10 ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:10
13 ತಿಳಿವುಗಳ ಹೋಲಿಕೆ  

ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,


ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.


ಗಂಗಾಳವನ್ನೂ, ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ, ಅದನ್ನು ಪ್ರತಿಷ್ಠಾಪನೆ ಮಾಡಬೇಕು.


ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.


ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು