Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:16 - ಕನ್ನಡ ಸಮಕಾಲಿಕ ಅನುವಾದ

16 ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:16
19 ತಿಳಿವುಗಳ ಹೋಲಿಕೆ  

ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ.


“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.


ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.


ಆಗ ಯೆಹೋವ ದೇವರ ಅಪ್ಪಣೆಯ ಮೇರೆಗೆ ನಾನು ಹೋಗಿ, ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.


ದೇವರು ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನು ಮಾಡಿದನು.


ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.


ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು, ಆ ಮುಂಡಾಸದ ಮೇಲೆ ಅಂದರೆ ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ, ಪವಿತ್ರವಾದ ಕಿರೀಟವನ್ನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಟ್ಟನು.


ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು.


ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು