ವಿಮೋಚನಕಾಂಡ 40:29 - ಕನ್ನಡ ಸಮಕಾಲಿಕ ಅನುವಾದ29 ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೆಹೋವನು ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಲಿನ ಮುಂದೆ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು. ಅಧ್ಯಾಯವನ್ನು ನೋಡಿ |