Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:33 - ಕನ್ನಡ ಸಮಕಾಲಿಕ ಅನುವಾದ

33 ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:33
21 ತಿಳಿವುಗಳ ಹೋಲಿಕೆ  

ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ಪರದೆಯನ್ನು ತೂಗು ಹಾಕಬೇಕು.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.


ಮಾಡಬೇಕೆಂದು ನೀವು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಮಿಯ ಮೇಲೆ ನಾನು ನಿಮ್ಮನ್ನು ಮಹಿಮೆಪಡಿಸಿದ್ದೇನೆ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು.


ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.


ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.


ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು.


ಸೊಲೊಮೋನನು ಆಲಯವನ್ನು ಕಟ್ಟಿಸಿ, ತೀರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು