Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:1 - ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:1
26 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.


ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.


ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.


ಅರಸರ ಮುಂದೆ ನಿಮ್ಮ ಶಾಸನಗಳನ್ನು ಮಾತಾಡುವೆನು, ಅವುಗಳ ಬಗ್ಗೆ ನಾನೆಂದೂ ನಾಚಿಕೆಪಡುವುದಿಲ್ಲ.


ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.


“ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು.


ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.


ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.


ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.


ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.


ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು.


ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಮಾತನಾಡಬೇಕು. ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.


ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು.


ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು


ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.


ಅನಂತರ ಯೆಹೋವ ದೇವರು ಮೋಶೆಗೆ ಹೇಳಿದ್ದೇನಂದರೆ, “ಫರೋಹನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.”


ಅವರನ್ನು ಕಳುಹಿಸುವುದಕ್ಕೆ ನಿರಾಕರಿಸಿ ಇನ್ನೂ ತಡೆದರೆ,


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು