Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಜನರು ಈಜಿಪ್ಟ್ ದೇಶದಲ್ಲೆಲ್ಲಾ ಸುತ್ತಿ, ಹುಲ್ಲು ಸಿಕ್ಕದೆ ಕೂಳೆಕಿತ್ತು ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಜನರು ಐಗುಪ್ತ ದೇಶದಲ್ಲೆಲ್ಲಾ ತಿರುಗಿ ಹುಲ್ಲು ಸಿಕ್ಕದೆ ಕೂಳೆ ಕಿತ್ತು ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಜನರು ಹುಲ್ಲನ್ನು ಹುಡುಕುತ್ತಾ ಈಜಿಪ್ಟಿನ ಪ್ರತಿಯೊಂದು ಕಡೆಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:12
9 ತಿಳಿವುಗಳ ಹೋಲಿಕೆ  

ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ,


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.


ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


“ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.


ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು.


ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು