Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಡೆಯಿರಿ ಕೆಲಸಕ್ಕೆ; ನಿಮಗೆ ಹುಲ್ಲು ಕೊಡುವುದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಲೇಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೆಲಸಕ್ಕೆ ನಡೆಯಿರಿ, ನಿಮಗೆ ಹುಲ್ಲನ್ನು ಕೊಡಿಸುವದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:18
6 ತಿಳಿವುಗಳ ಹೋಲಿಕೆ  

ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.


ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.


ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದ್ದರಿಂದ, ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಇದ್ದೇವೆಂದು ತಿಳಿದುಕೊಂಡರು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು