Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:21 - ಕನ್ನಡ ಸಮಕಾಲಿಕ ಅನುವಾದ

21 ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:21
19 ತಿಳಿವುಗಳ ಹೋಲಿಕೆ  

ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು.


“ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.


ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.


ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.


“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.


ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.


ಅವರು ಮೋಶೆಗೆ, “ಈಜಿಪ್ಟಿನಲ್ಲಿ ಸಮಾಧಿಗಳು ಇಲ್ಲದ ಕಾರಣ ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಕರೆದುಕೊಂಡು ಬಂದೆಯೋ? ಏಕೆ ನೀನು ಈ ಪ್ರಕಾರ ನಮಗೆ ಮಾಡಿ, ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆ?


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು.


ಆದ್ದರಿಂದ ಜನರು, “ನಾವು ಏನು ಕುಡಿಯೋಣ?” ಎಂದು ಹೇಳಿ, ಮೋಶೆಗೆ ವಿರೋಧವಾಗಿ ಗೊಣಗುಟ್ಟಿದರು.


ಆಗ ಇಸ್ರಾಯೇಲರ ಸಭೆಯೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ವಿರೋಧವಾಗಿ ಗೊಣಗುಟ್ಟಿದರು.


ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು