ವಿಮೋಚನಕಾಂಡ 6:12 - ಕನ್ನಡ ಸಮಕಾಲಿಕ ಅನುವಾದ12 ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ - ಇಗೋ, ಇಸ್ರಾಯೇಲ್ಯರೇ ನನ್ನ ಮಾತನ್ನು ಕೇಳಲಿಲ್ಲ. ಫರೋಹನು ಕಿವಿಗೊಟ್ಟಾನೇ? ನಾನು ಮಾತಾಡುವದರಲ್ಲಿ ಜಾಣನಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |