Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಯೇಲರ ಬಳಿಗೂ ಅರಸ ಫರೋಹನ ಬಳಿಗೂ ಕಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲ್ಯರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:13
14 ತಿಳಿವುಗಳ ಹೋಲಿಕೆ  

ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:


ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.


ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು.


ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.


ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು.


ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು