Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:14 - ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಗೋತ್ರಗಳ ಮೂಲಪುರುಷರು ಇವರು: ಇಸ್ರಯೇಲನ ಜ್ಯೇಷ್ಠ ಪುತ್ರನಾದ ರೂಬೇನನಿಗೆ ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದ ಉಂಟಾದ ಗೋತ್ರಗಳಿಗೆ ಮೂಲ ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರ ಗೋತ್ರಗಳ ಪ್ರಧಾನ ಪುರುಷರು. ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನಿಗೆ ಹನೋಕ್ ಫಲ್ಲು ಹೆಚ್ರೋನ್ ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:14
17 ತಿಳಿವುಗಳ ಹೋಲಿಕೆ  

ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್ ಮತ್ತು ಕರ್ಮೀ ಎಂಬುವರು.


ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನನು, ಕರ್ಮೀ.


ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು.


ಬೆಳನ ಪುತ್ರರು: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ; ಈ ಐದು ಮಂದಿ ತಮ್ಮ ಪಿತೃಗಳ ಕುಟುಂಬಗಳಲ್ಲಿ ಯಜಮಾನರಾಗಿಯೂ, ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿಯೂ ಇದ್ದು, ತಮ್ಮ ವಂಶಾವಳಿಗಳ ಪ್ರಕಾರ 22,034 ಮಂದಿ ದಾಖಲಿಸಿದ್ದರು.


ತೋಲನ ಪುತ್ರರು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುಯೇಲ್. ಇವರು ತಮ್ಮ ಕುಟುಂಬಗಳಿಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ದಾವೀದನ ದಿವಸಗಳಲ್ಲಿ ಅವರ ಲೆಕ್ಕ 22,600 ಮಂದಿ ಆಗಿತ್ತು.


ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು.


ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.


ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.


ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು.


ಮೋಶೆಯು ರೂಬೇನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:


ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು.


ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು.


ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.


ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.


ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು