Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:30 - ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಮೋಶೆಯು ಯೆಹೋವ ದೇವರ ಮುಂದೆ, “ಇಗೋ, ನಾನು ತೊದಲು ಮಾತನಾಡುವವನು. ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಮೋಶೆ, “ಸ್ವಾಮೀ, ನಾನು ಮಾತಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮಾತಾಡುವದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:30
6 ತಿಳಿವುಗಳ ಹೋಲಿಕೆ  

ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.


ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.


ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು