Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:5 - ಕನ್ನಡ ಸಮಕಾಲಿಕ ಅನುವಾದ

5 ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಜಿಪ್ಟಿನವರು ಗುಲಾಮರನ್ನಾಗಿಸಿಕೊಂಡಿರುವ ಇಸ್ರಯೇಲರ ಗೋಳು ನನಗೆ ಕೇಳಿಸಿದೆ. ನಾನು ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಐಗುಪ್ತ್ಯರು ದಾಸರನ್ನಾಗಿ ಮಾಡಿಕೊಂಡಿರುವ ಇಸ್ರಾಯೇಲ್ಯರ ಗೋಳು ಈಗ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:5
11 ತಿಳಿವುಗಳ ಹೋಲಿಕೆ  

ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.”


ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.


ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.


ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.


ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು