Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:8
29 ತಿಳಿವುಗಳ ಹೋಲಿಕೆ  

ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ.


ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ.


ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು.


ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನನ್ನ ಕೈಯೆತ್ತಿ ಪ್ರಮಾಣ ಮಾಡಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿರುವ ಆ ಜನಾಂಗಗಳು ತಮ್ಮ ನಿಂದೆಯನ್ನು ಹೊರುವರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಇದಲ್ಲದೆ ದೇವರು ಮೋಶೆಯ ಸಂಗಡ ಮಾತನಾಡಿ, “ನಾನೇ ಯೆಹೋವ ದೇವರು.


ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!


ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.


ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.


ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು