Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:9 - ಕನ್ನಡ ಸಮಕಾಲಿಕ ಅನುವಾದ

9 ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಿದನು. ಆದರೂ ಅವರ ಮನಸ್ಸು ಕುಗ್ಗಿ ಹೋದದರಿಂದಲೂ ಕಠಿಣವಾಗಿ ಸೇವೆಮಾಡಬೇಕಾದದರಿಂದಲೂ ಅವರು ಅವನ ಮಾತಿಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:9
9 ತಿಳಿವುಗಳ ಹೋಲಿಕೆ  

“ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? ನಾನೇಕೆ ಬೇಸರಪಡಬಾರದು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.


ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.


ನಾವು ಈಜಿಪ್ಟ್ ದೇಶದಲ್ಲಿದ್ದಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ, ನಾವು ಈಜಿಪ್ಟಿನವರಿಗೆ ಸೇವೆಮಾಡುತ್ತೇವೆ,’ ಎಂದು ನಿನಗೆ ಹೇಳಲಿಲ್ಲವೇ? ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಸೇವೆ ಮಾಡುವುದೇ ಒಳ್ಳೆಯದಾಗಿತ್ತಲ್ಲಾ?” ಎಂದು ಹೇಳಿದರು.


ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.


ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.


ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು