ವಿಮೋಚನಕಾಂಡ 7:1 - ಕನ್ನಡ ಸಮಕಾಲಿಕ ಅನುವಾದ1 ಆಗ ಯೆಹೋವ ದೇವರು ಮೋಶೆಗೆ, “ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ. ನಿನ್ನ ಸಹೋದರನಾದ ಆರೋನನು ನಿನ್ನ ಪ್ರವಾದಿಯಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೆಹೋವನು ಮೋಶೆಗೆ ಇಂತೆಂದನು - ನಿನ್ನನ್ನು ಫರೋಹನಿಗೆ ದೇವರ ಸ್ಥಾನದಲ್ಲಿ ನೇವಿುಸಿದ್ದೇನೆ, ನೋಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ, “ನಾನು ನಿನ್ನನ್ನು ಫರೋಹನಿಗೆ ಮಹಾರಾಜನಂತೆ ಮಾಡಿರುವೆನು; ಆರೋನನು ಅಧಿಕೃತ ಮಾತುಗಾರನಾಗಿರುವನು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.