Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:17 - ಕನ್ನಡ ಸಮಕಾಲಿಕ ಅನುವಾದ

17 ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:17
30 ತಿಳಿವುಗಳ ಹೋಲಿಕೆ  

ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು.


ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’


ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.


ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “ ‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. ಅವರ ಮೀನುಗಳನ್ನು ನಾಶಮಾಡಿದರು.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಫರೋಹನ ಮುಂದೆಯೂ, ಅವನ ಸೇವಕರ ಮುಂದೆಯೂ ಹೊಡೆದನು. ಆಗ ನದಿಯಲ್ಲಿದ್ದ ನೀರೆಲ್ಲಾ ರಕ್ತವಾಯಿತು.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ನಾನು ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು