Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:9 - ಕನ್ನಡ ಸಮಕಾಲಿಕ ಅನುವಾದ

9 “ಫರೋಹನು ನಿಮಗೆ, ‘ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರಿ,’ ಎಂದಾಗ ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಫರೋಹನ ಮುಂದೆ ಬಿಸಾಡು,’ ಎಂದು ಹೇಳು, ಆಗ ಅದು ಸರ್ಪವಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 "ಫರೋಹನು ನಿಮಗೆ, ‘ನಾನು ನಿಮ್ಮ ಮಾತನ್ನು ನಂಬಬೇಕಾದರೆ ಮಹತ್ಕಾರ್ಯವೊಂದನ್ನು ನನ್ನ ಮುಂದೆ ಮಾಡಿ,’ ಎಂದು ಹೇಳಿದರೆ ಮೋಶೆ ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದ ಮೇಲೆ ಬಿಸಾಡು’ ಎಂದು ಹೇಳಲಿ. ಅದು ಸರ್ಪವಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಫರೋಹನು ನಿಮಗೆ - ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕೆಂದು ಹೇಳಿದರೆ ಮೋಶೆಯು ಆರೋನನಿಗೆ - ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಬೀಸಾಡು ಎಂದು ಹೇಳಬೇಕು, ಅದು ಸರ್ಪವಾಗುವದು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣೆದುರಿನಲ್ಲಿಯೇ ಸರ್ಪವಾಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:9
15 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.


“ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು.


ಯೆಹೋವ ದೇವರು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು. ಅವನು, “ಕೋಲು,” ಎಂದನು.


ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?


ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ಮೋಶೆಯು ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದಾಗ, ಯೆಹೋವ ದೇವರು ಹಗಲಲ್ಲೂ ರಾತ್ರಿಯಲ್ಲೂ ಪೂರ್ವದಿಕ್ಕಿನಿಂದ ಗಾಳಿಯನ್ನು ಬರಮಾಡಿದರು. ಉದಯವಾದಾಗ ಆ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.


ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು.


ಆಗ ಯೆಹೋವ ದೇವರು ಮಾತನಾಡಿ ಮೋಶೆಗೂ ಆರೋನನಿಗೂ,


ಯೆಹೋವ ದೇವರು ಅವನಿಗೆ, “ಅದನ್ನು ನೆಲದ ಮೇಲೆ ಬಿಸಾಡು,” ಎಂದರು. ಅವನು ಅದನ್ನು ನೆಲದ ಮೇಲೆ ಬಿಸಾಡಿದನು. ಆಗ ಅದು ಸರ್ಪವಾಯಿತು. ಮೋಶೆ ಅಲ್ಲಿಂದ ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು