Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:15
24 ತಿಳಿವುಗಳ ಹೋಲಿಕೆ  

ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.


ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.


ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.


ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು.


ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು.


ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.


ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡಿದ್ದಲ್ಲದೆ, ಜನರನ್ನೂ ಹೋಗಗೊಡಿಸಲಿಲ್ಲ.


ಈಜಿಪ್ಟಿನವರೂ, ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ, ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವುದೇನು? ದೇವರು ಅವರ ಮಧ್ಯದಲ್ಲಿ ಆಶ್ಚರ್ಯಕರವಾದ ಕ್ರಿಯೆಗಳನ್ನು ನಡಿಸಿದಾಗ, ಅವರು ಇಸ್ರಾಯೇಲರನ್ನು ಅವರು ಹೋಗುವಹಾಗೆ ಕಳುಹಿಸಲಿಲ್ಲವೋ?


ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.


ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.


ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು