Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:18 - ಕನ್ನಡ ಸಮಕಾಲಿಕ ಅನುವಾದ

18 ಮಂತ್ರಗಾರರು ಹೇನುಗಳನ್ನು ಬರಮಾಡುವುದಕ್ಕೆ ತಮ್ಮ ಮಾಟಗಳಿಂದ ಪ್ರಯತ್ನಿಸಿದರು, ಆದರೆ ಸಾಧ್ಯವಾಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮಾಟಗಾರರು ತಮ್ಮ ತಂತ್ರ ಮಂತ್ರಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಆ ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜೋಯಿಸರು ತಮ್ಮ ಗುಪ್ತ ವಿದ್ಯೆಯಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವದಕ್ಕೆ ಪ್ರಯತ್ನ ಮಾಡಿದಾಗ್ಯೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಲು ಪ್ರಯತ್ನಿಸಿದರೂ ಧೂಳಿನಿಂದ ಹೇನುಗಳನ್ನು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಹೇನುಗಳು ಪ್ರಾಣಿಗಳ ಮೇಲೂ ಜನರ ಮೇಲೂ ಉಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:18
13 ತಿಳಿವುಗಳ ಹೋಲಿಕೆ  

ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.


ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.


ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.


ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.


ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.


ನಿನ್ನ ಜ್ಞಾನಿಗಳು ಎಲ್ಲಿ? ನಿನಗೆ ಅವರು ಹೇಳಲಿ. ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿನವರ ವಿರೋಧವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದುಕೊಳ್ಳಲಿ.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.


ಅವರು ತಮ್ಮ ತಮ್ಮ ಕೋಲುಗಳನ್ನು ಬಿಸಾಡಿದಾಗ, ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.


ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು.


ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು