ವಿಮೋಚನಕಾಂಡ 8:19 - ಕನ್ನಡ ಸಮಕಾಲಿಕ ಅನುವಾದ19 ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. ಅಧ್ಯಾಯವನ್ನು ನೋಡಿ |