Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಹೋಗಿ ಈ ದೇಶದೊಳಗೇ ನಿಮ್ಮ ದೇವರಿಗೆ ಯಜ್ಞ ಮಾಡಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನಿಮ್ಮ ದೇವರಿಗೆ ಈ ದೇಶದಲ್ಲಿಯೇ ಯಜ್ಞಗಳನ್ನು ಅರ್ಪಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:25
9 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ.


ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ, “ನಾನು ನಿಮ್ಮ ದೇವರಾದ ಯೆಹೋವ ದೇವರಿಗೂ, ನಿಮಗೂ ವಿರೋಧವಾಗಿ ಪಾಪಮಾಡಿದ್ದೇನೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಆದುದರಿಂದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಆದರೆ ಹೋಗುವವರು ಯಾರ‍್ಯಾರು?” ಎಂದು ಕೇಳಿದನು.


ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ. ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಡದಿ ಮಕ್ಕಳೂ ನಿಮ್ಮ ಸಂಗಡ ಹೋಗಲಿ,” ಎಂದನು.


ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು