ವಿಮೋಚನಕಾಂಡ 8:31 - ಕನ್ನಡ ಸಮಕಾಲಿಕ ಅನುವಾದ31 ಮೋಶೆಯು ಕೇಳಿದಂತೆಯೇ ಯೆಹೋವ ದೇವರು ಮಾಡಿದರು. ಅವರು ಫರೋಹನಿಂದಲೂ ಅವನ ಸೇವಕರಿಂದಲೂ, ಅವರ ಜನರಿಂದಲೂ ನೊಣಗಳನ್ನು ತೆಗೆದುಹಾಕಿದರು. ಅಲ್ಲಿ ಒಂದಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅವನ ಪ್ರಾರ್ಥನೆಯ ಮೇರೆಗೆ ಸರ್ವೇಶ್ವರ ಮಾಡಿದರು. ಆ ನೊಣಗಳೆಲ್ಲ ಫರೋಹನ ಹಾಗು ಅವನ ಪ್ರಜಾಪರಿವಾರದವರ ಬಳಿಯಿಂದ ತೊಲಗಿಹೋದವು. ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಹುಳಗಳೆಲ್ಲಾ ಫರೋಹನ ಬಳಿಯಿಂದಲೂ ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು; ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಯೆಹೋವನು ಫರೋಹನಿಂದಲೂ ಅವನ ಅಧಿಕಾರಿಗಳಿಂದಲೂ ಅವನ ಜನರಿಂದಲೂ ಹುಳಗಳನ್ನು ತೊಲಗಿಸಿದನು. ಯಾವ ಹುಳಗಳೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿ |