Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:6 - ಕನ್ನಡ ಸಮಕಾಲಿಕ ಅನುವಾದ

6 ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆರೋನನು ಐಗುಪ್ತದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ಮುಚ್ಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:6
17 ತಿಳಿವುಗಳ ಹೋಲಿಕೆ  

ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.


ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು.


ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.


ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು.


ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


“ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.


ಹೀಗೆ ಪ್ರಾರ್ಥಿಸಿದನು. “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಆಕಾಶದಲ್ಲಾದರೂ, ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸಿದ್ದೀರಿ.


ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.


ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.


ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು