Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು; ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:8
24 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.


ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.


ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಅದಕ್ಕೆ ಮೋಶೆ, “ಈ ಕಪ್ಪೆಗಳು ತಮ್ಮ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ಹೋಗಿ, ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ನಿನ್ನ ಪರವಾಗಿ, ನಿನ್ನ ಪ್ರಜಾ ಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ನಿನಗೆ ಸರಿದೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.


ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.


ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.


ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡಿದ್ದಲ್ಲದೆ, ಜನರನ್ನೂ ಹೋಗಗೊಡಿಸಲಿಲ್ಲ.


ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.


ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ, “ನಾನು ನಿಮ್ಮ ದೇವರಾದ ಯೆಹೋವ ದೇವರಿಗೂ, ನಿಮಗೂ ವಿರೋಧವಾಗಿ ಪಾಪಮಾಡಿದ್ದೇನೆ.


ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.


ಆಗ ಮೋಶೆ ಫರೋಹನನ್ನು ಬಿಟ್ಟು ಹೋಗಿ ಯೆಹೋವ ದೇವರನ್ನು ಬೇಡಿಕೊಂಡನು.


ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು