ವಿಮೋಚನಕಾಂಡ 8:9 - ಕನ್ನಡ ಸಮಕಾಲಿಕ ಅನುವಾದ9 ಅದಕ್ಕೆ ಮೋಶೆ, “ಈ ಕಪ್ಪೆಗಳು ತಮ್ಮ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ಹೋಗಿ, ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ನಿನ್ನ ಪರವಾಗಿ, ನಿನ್ನ ಪ್ರಜಾ ಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ನಿನಗೆ ಸರಿದೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಕ್ಕೆ ಮೋಶೆ ಫರೋಹನಿಗೆ, “ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು” ಎಂದು ಫರೋಹನನ್ನು ವಿನಂತಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಮೋಶೆ, "ಈ ಕಪ್ಪೆಗಳು ತಮ್ಮ ಬಳಿಯಿಂದಲೂ ತಮ್ಮ ಮನೆ ಮಾರುಗಳಿಂದಲೂ ತೊಲಗಿಹೋಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ತಮ್ಮ ಪರವಾಗಿ, ತಮ್ಮ ಪ್ರಜಾಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ತಮ್ಮ ಘನಚಿತ್ತಕ್ಕೆ ಸರಿತೋರಿದಂತೆ ತಾವೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೋಶೆ - ಘನಚಿತ್ತಕ್ಕೆ ತೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನೇವಿುಸಬೇಕು. ಈ ಕಪ್ಪೆಗಳು ಯಾವಾಗ ನಿನ್ನ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ನಿನಗೋಸ್ಕರವೂ ನಿನ್ನ ಪ್ರಜಾಪರಿವಾರದವರಿಗೋಸ್ಕರವೂ ಬೇಡಿಕೊಳ್ಳಲಿ ಎಂದು ಫರೋಹನನ್ನು ಕೇಳಲು ಅವನು - ನಾಳೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೋಶೆಯು ಫರೋಹನಿಗೆ, “ಕಪ್ಪೆಗಳು ಯಾವಾಗ ಬಿಟ್ಟುಹೋಗಬೇಕೆಂದು ತಿಳಿಸು. ನಾನು ನಿನಗೋಸ್ಕರ, ನಿನ್ನ ಜನರಿಗೋಸ್ಕರ ಮತ್ತು ನಿನ್ನ ಅಧಿಕಾರಿಗಳಿಗೋಸ್ಕರ ಪ್ರಾರ್ಥಿಸುವೆನು. ಆಗ ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿಯುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |