Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೂ ಯೆಹೋವನು ಮೋಶೆಗೆ ಹೇಳಿದ್ದಂತೆಯೇ ಆಯಿತು; ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:12
13 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”


ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.


ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.


ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ಕಳುಹಿಸದೆ ಹೋದನು.


ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.


ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು