Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಅವರು ಆರಾಧಿಸುವ ಹಾಗೆ ನನ್ನ ಜನರನ್ನು ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಳಿಕ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಹೋಗಿ ಫರೋಹನ ಮುಂದೆ ನಿಂತುಕೊಂಡು ಹೀಗೆನ್ನಬೇಕು: ‘ಹಿಬ್ರಿಯರ ದೇವರಾದ ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಹೀಗನ್ನಬೇಕು - ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಯೆಹೋವನು ಮೋಶೆಗೆ, “ಮುಂಜಾನೆ ಎದ್ದು ಫರೋಹನ ಬಳಿಗೆ ಹೋಗಿ, ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನನ್ನನ್ನು ಆರಾಧಿಸಲು ನನ್ನ ಜನರು ಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:13
5 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.


ಬೆಳಿಗ್ಗೆ ಫರೋಹನ ಬಳಿಗೆ ಹೋಗು. ಅವನು ಹೊರಗೆ ನದಿಯ ಬಳಿಗೆ ಹೋಗುವನು. ಆಗ ನೈಲ್ ನದಿ ತೀರದಲ್ಲಿ ಅವನೆದುರಿಗೆ ನಿಂತುಕೊಂಡು, ಸರ್ಪವಾಗಿ ಮಾಡಿದ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡಿರು.


ಅನಂತರ ಯೆಹೋವ ದೇವರು ಮೋಶೆಗೆ ಹೇಳಿದ್ದೇನಂದರೆ, “ಫರೋಹನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.”


ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.


ಅವರನ್ನು ಕಳುಹಿಸುವುದಕ್ಕೆ ನಿರಾಕರಿಸಿ ಇನ್ನೂ ತಡೆದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು