Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:15 - ಕನ್ನಡ ಸಮಕಾಲಿಕ ಅನುವಾದ

15 ಈಗ ನನ್ನ ಕೈಚಾಚಿ ನಿನ್ನನ್ನೂ, ನಿನ್ನ ಜನರನ್ನೂ ಉಪದ್ರವದಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು. ಆಗ ನೀನು ಈವರೆಗೆ ಭೂಮಿಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು; ಆಗ ನೀನು ಈವರೆಗೆ ಭೂವಿುಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನನ್ನ ಶಕ್ತಿಯಿಂದ ನಿನಗೂ ನಿನ್ನ ಜನರಿಗೂ ವ್ಯಾಧಿಯನ್ನು ಬರಮಾಡಿ ನಿಮ್ಮನ್ನು ನಿರ್ಮೂಲ ಮಾಡಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:15
13 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.


ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.


ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.


ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ಆದರೆ ಮಹಾಶಕ್ತಿಯಿಂದಲೂ, ಚಾಚಿದ ಭುಜಪರಾಕ್ರಮದಿಂದಲೂ ಈಜಿಪ್ಟ್ ದೇಶದಿಂದ ನಿಮ್ಮನ್ನು ಬರಮಾಡಿದ ಯೆಹೋವ ದೇವರಿಗೆ ನೀವು ಭಯಪಟ್ಟು, ಅವರೊಬ್ಬರಿಗೇ ಅಡ್ಡಬಿದ್ದು, ಬಲಿ ಅರ್ಪಿಸಿರಿ.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು