Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:16
30 ತಿಳಿವುಗಳ ಹೋಲಿಕೆ  

ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.


ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.


ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.


ಈಗ ನನ್ನ ಕೈಚಾಚಿ ನಿನ್ನನ್ನೂ, ನಿನ್ನ ಜನರನ್ನೂ ಉಪದ್ರವದಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.


ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?


ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.


ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.


“ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು