Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಫರೋಹನ ಸೇವಕರಲ್ಲಿ ಯೆಹೋವ ದೇವರ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿ ಬರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:20
10 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.


ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.


ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.


ಫರೋಹನು ತಿರುಗಿಕೊಂಡು ತನ್ನ ಅರಮನೆಗೆ ಹಿಂದಿರುಗಿದನು. ಅವನು ಈ ಅದ್ಭುತಕ್ಕೂ ಗಮನಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು