ವಿಮೋಚನಕಾಂಡ 9:22 - ಕನ್ನಡ ಸಮಕಾಲಿಕ ಅನುವಾದ22 ಆಗ ಯೆಹೋವ ದೇವರು ಮೋಶೆಗೆ, “ಆಕಾಶದ ಕಡೆಗೆ ನಿನ್ನ ಕೈಚಾಚು. ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಈಜಿಪ್ಟ್ ದೇಶದಲ್ಲಿ ಇರುವ ಎಲ್ಲಾ ಹೊಲದ ಬೆಳೆಯ ಮೇಲೆಯೂ ಆಲಿಕಲ್ಲಿನ ಮಳೆ ಸುರಿಯುವುದು,” ಎಂದು ಪ್ರಕಟಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |