Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:23 - ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆಯು ತನ್ನ ಕೋಲನ್ನು ಆಕಾಶಕ್ಕೆ ಚಾಚಿದಾಗ ಯೆಹೋವನು ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಉಂಟುಮಾಡಿದನು. ಸಿಡಿಲುಗಳು ನೆಲಕ್ಕೆ ಬಿದ್ದವು. ಯೆಹೋವನು ಐಗುಪ್ತದೇಶದ ಮೇಲೆ ಕಲ್ಲಿನ ಮಳೆಯನ್ನು ಸುರಿಸಿದನು. ಕಲ್ಲಿನ ಮಳೆಯು ಬಹು ಬಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದನು. ಕೂಡಲೇ ಯೆಹೋವನು, ಗುಡುಗು ಮಿಂಚುಗಳಿಂದ ಕೂಡಿದ ಆಲಿಕಲ್ಲಿನ ಮಳೆಯನ್ನು ಈಜಿಪ್ಟಿನಲ್ಲೆಲ್ಲಾ ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:23
22 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,


ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.


ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.


ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.


ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.


ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ.


ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, ಮೇಘಗಳನ್ನು ಬರಮಾಡುತ್ತಾರೆ.


ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು