Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಫರೋಹನು ಮೋಶೆ ಆರೋನರನ್ನು ಕರಿಸಿ ಅವರಿಗೆ - ನಾನು ಅಪರಾಧಿಯೆಂದು ಈಗ ಒಪ್ಪಿಕೊಂಡೆನು; ಯೆಹೋವನು ನ್ಯಾಯವಂತನು, ನಾನೂ ನನ್ನ ಜನರೂ ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:27
20 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


ಆದರೆ ಯೆಹೋವ ದೇವರು ನೀತಿವಂತರು; ದುಷ್ಟರು ಹಾಕಿದ ಬಂಧಗಳನ್ನು ದೇವರು ಕಡಿದು, ನಮ್ಮನ್ನು ಬಿಡುಗಡೆ ಮಾಡಿದ್ದಾರೆ.”


ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು.


ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ, “ನಾನು ನಿಮ್ಮ ದೇವರಾದ ಯೆಹೋವ ದೇವರಿಗೂ, ನಿಮಗೂ ವಿರೋಧವಾಗಿ ಪಾಪಮಾಡಿದ್ದೇನೆ.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.


ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ,” ಎಂದನು.


ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.


ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು