Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:32 - ಕನ್ನಡ ಸಮಕಾಲಿಕ ಅನುವಾದ

32 ಆದರೆ ಗೋಧಿ ಮತ್ತು ಕಡಲೆ ಬೆಳೆದಿಲ್ಲವಾದ್ದರಿಂದ ಹಾಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಗೋದಿಯೂ ಕಡಲೆಯೂ ಹಿಂದಿನ ಬೆಳೆಯಾದದರಿಂದ ಅದಕ್ಕೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:32
8 ತಿಳಿವುಗಳ ಹೋಲಿಕೆ  

ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ, ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿನಗಳವರೆಗೆ ಘೋರವಾದ ಕತ್ತಲೆ ಕವಿಯಿತು.


ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು.


ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.


ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.


ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.


“ನೀನು ಗೋಧಿ, ಜವೆಗೋಧಿ, ಅವರೆ, ಅಲಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು, ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು, ನೀನು ಒಂದು ಕಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು, ಮುನ್ನೂರ ತೊಂಬತ್ತು ದಿನಗಳು ಅವರಿಂದಲೇ ತಿನ್ನಬೇಕು.


ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.


ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು