Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:5 - ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಯೆಹೋವ ದೇವರು, “ನಿರ್ದಿಷ್ಟವಾದ ಒಂದು ಸಮಯವನ್ನು ನೇಮಿಸಿ, ನಾಳೆ ಯೆಹೋವ ದೇವರು ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವರು, ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಕ್ಕೆ ಕಾಲವನ್ನೂ ಆತ ನಿಗದಿ ಮಾಡಿದ್ದಾರೆ; ನಾಳೆಯೇ ಈ ಕಾರ್ಯವನ್ನು ನಡೆಸುವರು,’ ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯೆಹೋವನು ಕಾಲವನ್ನು ನಿರ್ಣಯಿಸಿ - ನಾಳೆಯೇ ಈ ಕಾರ್ಯವನ್ನು ನಡಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದು ನಡೆಯತಕ್ಕ ಕಾಲವನ್ನು ನಿರ್ಣಯಿಸಿ ನಾಳೆಯೇ ಇದನ್ನು ಕಾರ್ಯರೂಪಕ್ಕೆ ತರುವೆನು’ ಎಂದು ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:5
10 ತಿಳಿವುಗಳ ಹೋಲಿಕೆ  

ನನ್ನ ಜನರನ್ನೂ, ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಸೂಚಕಕಾರ್ಯ ಕಾಣುವುದು,’ ಎಂದು ಹೇಳು,” ಎಂದರು.


“ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.


ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.


ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು