Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಯೆಹೋವ ದೇವರು ಮೋಶೆ ಆರೋನರಿಗೆ, “ಕೈತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ. ಅದನ್ನು ಮೋಶೆಯು ಫರೋಹನ ಮುಂದೆ ಆಕಾಶದ ಕಡೆಗೆ ತೂರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ, ಮೋಶೆ ಮತ್ತು ಆರೋನರಿಗೆ, “ನೀವು ಆವಿಗೆಯ ಬೂದಿಯನ್ನು ಕೈ ತುಂಬ ತೆಗೆದುಕೊಳ್ಳಿ. ಮೋಶೆ ಅದನ್ನು ಫರೋಹನ ಕಣ್ಮುಂದೆ ಆಕಾಶಕ್ಕೆ ತೂರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಮೋಶೆ ಆರೋನರಿಗೆ - ನೀವು ಆವಿಗೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ; ಮೋಶೆ ಅದನ್ನು ಫರೋಹನ ಕಣ್ಣಿನ ಮುಂದೆ ಆಕಾಶಕ್ಕೆ ತೂರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಮೋಶೆ ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ. ಮೋಶೆಯು ಅದನ್ನು ಫರೋಹನ ಮುಂದೆ ಗಾಳಿಯಲ್ಲಿ ತೂರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:8
4 ತಿಳಿವುಗಳ ಹೋಲಿಕೆ  

ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು.


ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.


ಆಗ ಅದು ಈಜಿಪ್ಟ್ ದೇಶದಲ್ಲೆಲ್ಲಾ ಪುಡಿಯಾಗುವುದು. ಅದು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವುದು,” ಎಂದು ಹೇಳಿದರು.


ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು