ಹಗ್ಗಾಯ 1:1 - ಕನ್ನಡ ಸಮಕಾಲಿಕ ಅನುವಾದ1 ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ: ಅಧ್ಯಾಯವನ್ನು ನೋಡಿ |
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,