Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:10 - ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಪರಿಣಾಮವಾಗಿ ಆಕಾಶ ಮಳೆಯನ್ನು ಸುರಿಸಿಲ್ಲ, ಭೂಮಿ ಬೆಳೆಯನ್ನು ಫಲಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ನಿವಿುತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂವಿುಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದಕ್ಕಾಗಿಯೇ ಆಕಾಶವು ಮಂಜನ್ನು ಸುರಿಸುವುದಿಲ್ಲ. ಭೂಮಿಯು ಪೈರನ್ನು ಬೆಳೆಸುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:10
8 ತಿಳಿವುಗಳ ಹೋಲಿಕೆ  

“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,


ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


“ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.


ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು