ಹಗ್ಗಾಯ 1:11 - ಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂವಿುಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.” ಅಧ್ಯಾಯವನ್ನು ನೋಡಿ |