Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:12
19 ತಿಳಿವುಗಳ ಹೋಲಿಕೆ  

ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


“ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಜನರನ್ನು ಅಂದರೆ, ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಪರದೇಶಿಯರನ್ನೂ ಕೂಡಿಸಬೇಕು. ಅವರು ಕೇಳಿ ಕಲಿತು, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಈ ನಿಯಮದ ವಾಕ್ಯಗಳನ್ನೆಲ್ಲಾ ಕೈಗೊಂಡು ನಡೆಯುವ ಹಾಗೆ, ಅವರೆಲ್ಲರನ್ನು ಒಂದು ಕಡೆ ಕೂಡಿಸಬೇಕು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು.


ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು