Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರ ಕೊಟ್ಟ ಸಂದೇಶವೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹಗ್ಗಾಯನಿಗೆ ಮತ್ತೆ ಯೆಹೋವನಿಂದ ಸಂದೇಶವು ಬಂದಿತು. ಹಗ್ಗಾಯನು ಈ ಸಂದೇಶವನ್ನು ತಿಳಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:3
5 ತಿಳಿವುಗಳ ಹೋಲಿಕೆ  

ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.


ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”


“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು