Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:6 - ಕನ್ನಡ ಸಮಕಾಲಿಕ ಅನುವಾದ

6 ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:6
31 ತಿಳಿವುಗಳ ಹೋಲಿಕೆ  

ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


“ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ. ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರನ್ನೇ ಬಿಟ್ಟುಬಿಟ್ಟಿದ್ದಾರೆ.


ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.


“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”


ಏಕೆಂದರೆ ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ದುಡಿತವಿರಲಿಲ್ಲ; ಇಲ್ಲವೆ ಹೋಗುವವನಿಗೂ, ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾಧಾನವಿರಲಿಲ್ಲ. ನಾನು ಪ್ರತಿಯೊಬ್ಬನನ್ನು ಅವರ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೇನೆ.


‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”


ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”


ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.


ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; ಘೋರ ದುಃಖವು ಅವನ ಮೇಲೆ ಬರುವುದು.


ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ಅವರಲ್ಲಿ ಕೆಲವರು, “ನಾವೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ಅನೇಕರಾದುದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತೆಗೆದುಕೊಳ್ಳೋಣ,” ಎಂದರು.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.


ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಶಾಪ.


ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು