Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:9 - ಕನ್ನಡ ಸಮಕಾಲಿಕ ಅನುವಾದ

9 ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:9
25 ತಿಳಿವುಗಳ ಹೋಲಿಕೆ  

“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.


ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”


ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.


ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.


ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.


ಆಗ ಯೆಹೋವ ದೇವರ ಗದರಿಕೆಯಿಂದಲೂ, ಅವರ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿತು. ಭೂಲೋಕದ ಅಸ್ತಿವಾರಗಳು ಬಯಲಾದವು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.


ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು;


ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು