Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:12 - ಕನ್ನಡ ಸಮಕಾಲಿಕ ಅನುವಾದ

12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’ ” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಪ್ರತಿಷ್ಠಿತ ಮಾಂಸವನ್ನು ಕಟ್ಟಿಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ, ಅನ್ನವನ್ನಾಗಲಿ, ದ್ರಾಕ್ಷಾರಸವನ್ನಾಗಲೀ, ಎಣ್ಣೆಯನ್ನಾಗಲೀ ಅಥವಾ ಯಾವ ಆಹಾರ ಪದಾರ್ಥವನ್ನೇ ಆಗಲಿ ಸೋಕಿದರೆ ಅದು ಪವಿತ್ರವಾಗುತ್ತದೋ? ಎಂದು ಧರ್ಮವಿಧಿಯನ್ನು ವಿಚಾರಿಸು.” ಪ್ರವಾದಿ ಹಾಗೆ ವಿಚಾರಿಸಲು ಯಾಜಕರು ‘ಇಲ್ಲ’ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನು ಇಲ್ಲವೆ ಗುಗ್ಗರಿಯನ್ನು ಅಥವಾ ದ್ರಾಕ್ಷಾರಸವನ್ನು ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವವೋ ಎಂದು ಧರ್ಮವಿಧಿಯನ್ನು ವಿಚಾರಿಸು. [ಪ್ರವಾದಿಯು ಹಾಗೆ ವಿಚಾರಿಸಲು] ಯಾಜಕರು ಇಲ್ಲವೆಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’” ಯಾಜಕರು ಉತ್ತರವಾಗಿ, “ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:12
8 ತಿಳಿವುಗಳ ಹೋಲಿಕೆ  

ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?


ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.


ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು