ಹಗ್ಗಾಯ 2:16 - ಕನ್ನಡ ಸಮಕಾಲಿಕ ಅನುವಾದ16 ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು. ಅಧ್ಯಾಯವನ್ನು ನೋಡಿ |