ಹಗ್ಗಾಯ 2:21 - ಕನ್ನಡ ಸಮಕಾಲಿಕ ಅನುವಾದ21 ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ - ನಾನು ಭೂಮ್ಯಾಕಾಶಗಳನ್ನು ಅದುರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,