ಹಗ್ಗಾಯ 2:3 - ಕನ್ನಡ ಸಮಕಾಲಿಕ ಅನುವಾದ3 ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ಆಲಯದ ಪೂರ್ವವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಾಗಿ ಕಾಣಿಸುತ್ತದಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ? ಅಧ್ಯಾಯವನ್ನು ನೋಡಿ |